ಕುಕ್ಕೆ ಸುಬ್ರಹ್ಮಣ್ಯ ದೇವರ ಮೊರೆ ಹೋದ ಹೆಚ್.ಡಿ.ಕೆ

Webdunia
ಮಂಗಳವಾರ, 14 ಆಗಸ್ಟ್ 2018 (14:11 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮಾಡಿದರು. ಆಶ್ಲೇಷ ಪೂಜೆ ಸೇವೆ ಸಲ್ಲಿಸಿದರು. ಬಳಿಕ ಓಣ ದ್ರಾಕ್ಷಿ ಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.

ಕಳೆದ ರಾತ್ರಿ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವರ ದರ್ಶನ ಮಾಡಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಳಿಕ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಶ್ರಾವಣ ಮಾಸ ಆದ ಕಾರಣ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ಕಷ್ಟಗಳನ್ನು ನಿವಾರಿಸಲು  ಸುಬ್ರಮಣ್ಯ ಸ್ವಾಮಿ ದರ್ಶನಕ್ಕೆ ಬಂದಿದ್ದೇವೆ.
ರಾಜ್ಯದ ರೈತರಿಗೆ ಉತ್ತಮ ಬದುಕು ಸಿಗಲಿ, ಜನರ ಸಮಸ್ಯೆ ಬಗೆಹರಿಸಲು ಶಕ್ತಿಯನ್ನು ದೇವರು ನನಗೆ ನೀಡುವಂತೆ ಪ್ರಾರ್ಥಿಸಿಕೊಳ್ಳಲು ದೇವರ ದರ್ಶನಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರೊಂದಿಗೆ ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ ಹಾಜರಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ ಹಿನ್ನಲೆಯಲ್ಲಿ ಸುಬ್ರಮಣ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಅಣ್ಣಾಮಲೈ ಅವರನ್ನು ಕಡೆಗಣಿಸಿ ಬಿಜೆಪಿ ತಪ್ಪು ಮಾಡಿತೇ

ಮುಂದಿನ ಸುದ್ದಿ
Show comments