Select Your Language

Notifications

webdunia
webdunia
webdunia
webdunia

'ನನ್ನನ್ನು ಜೈಲಿಗೆ ಕಳಿಸುವ ಪ್ರಯತ್ನ ಮಾಡಿದ್ದರು'

He tried to send me to jail'
bangalore , ಗುರುವಾರ, 21 ಏಪ್ರಿಲ್ 2022 (18:38 IST)
ಈಶ್ಚರಪ್ಪ ಬದಲು ಕುಮಾರಸ್ವಾಮಿಯನ್ನು ಬಂಧಿಸಬೇಕಾ’ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಮಹಾನ್ ನಾಯಕ ಸಿದ್ದರಾಮಯ್ಯ 12 ವರ್ಷದ ಹಿಂದೆ ದಾಖಲಾಗಿದ್ದ ಪ್ರಕರಣದ ಮೂಲಕ ನನ್ನನ್ನು ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದ್ದರು. ನಾನು ಚಪಲಕ್ಕೋ ಅಥವಾ ಯಾರಿಗೋ ತೊಂದರೆ ಕೊಡಲು ಮಾತನಾಡುವುದಿಲ್ಲ’ ಎಂದು ‘ಸುಳ್ಳಿನ ರಾಮಯ್ಯ’ ಹೇಳಿಕೆ ಪುನರುಚ್ಚರಿಸಿದ್ದಾರೆ. ‘ನಾನು ಕೆ. ಎಸ್. ಈಶ್ವರಪ್ಪ ಲಾಯರ್ ಅಲ್ಲ. ಅವರ ಬಗ್ಗೆ ಯಾವ ಸಾಫ್ಟ್ ಕಾರ್ನರ್ ಕೂಡ ಇಲ್ಲ. ನಾನು ದಾಖಲೆಗಳ ಬಗ್ಗೆ ಮಾತನಾಡಿದ್ದೇನೆ. ಸಂತೋಷ್ ಅವರು ವಾಟ್ಸ್‌ಆ್ಯಪ್ ಮೆಸೇಜ್ ಕಳುಹಿಸಿದ್ದಾರೆ. ಸಂಪೂರ್ಣ ತನಿಖೆ ಮಾಡಲು ಒತ್ತಾಯಿಸಿದ್ದೇನೆ. ಈಶ್ವರಪ್ಪ ತಪ್ಪು ಮಾಡಿದ್ದರೆ ಅವರೇ ಕಾರಣಕರ್ತರಾಗಿದ್ದರೆ ಬಂಧಿಸಿ. ಈಶ್ವರಪ್ಪ ನನ್ನಿಂದ ಹಣ ಕೇಳಿಲ್ಲ ಅಂತಾ ಸಂತೋಷ್ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಅಂತಾ ಹೇಳಿದ್ದೇನೆ’ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಸರಕಾರ ರಚನೆ ಮಾಡಿಯೇ ಮಾಡುತ್ತೇವೆ: ಅರವಿಂದ್‌ ಕೇಜ್ರಿವಾಲ್‌