Publish Date: Fri, 02 Sep 2022 (07:43 IST)
Updated Date: Fri, 02 Sep 2022 (07:46 IST)
ಬೆಂಗಳೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನುಡಿದಂತೆ ನಡೆಯುವ ಸಜ್ಜನ ವ್ಯಕ್ತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿರುವುದು ನಮಗೆ ಸಂಭ್ರಮ ಮತ್ತು ಹೆಮ್ಮೆ.
ಉತ್ತರದಿಂದ ದಕ್ಷಿಣದವರೆಗೂ ಅವರು ಮನೆ ಮಾತಾಗಿದ್ದಾರೆ. ಯೋಗಿ ಆದಿತ್ಯನಾಥ್ ಗುರುಗಳಾಗಿದ್ದವರು. ನಮ್ಮ ಧರ್ಮ ಮತ್ತು ಸಮಾಜದಲ್ಲಿ ಗುರುಗಳಿಗೆ ಅ ಅತ್ಯುತ್ತಮ ಸ್ಥಾನವಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ.
ಆದರ್ಶಪ್ರಾಯ, ಮಾದರಿಯಾಗಿ, ಸಾರ್ವಜನಿಕ ಜೀವನವನ್ನು ಅತಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನುಡಿದಂತೆ ನಡೆಯುತ್ತಾರೆ. ಗುರುಗಳು ಕೂಡ ದಕ್ಷ ಆಡಳಿತಗಾರರಾಗಬಹುದೆಂದು ಅವರು ನಿರೂಪಿಸಿದ್ದಾರೆ ಎಂದಿದ್ದಾರೆ.