Webdunia - Bharat's app for daily news and videos

Install App

ಆಫೀಸ್​ಗೆಂದು ಹೋದವ ಶವವಾಗಿ ಪತ್ತೆ

Webdunia
ಗುರುವಾರ, 6 ಜುಲೈ 2023 (12:00 IST)
ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಬಳಿ ನಡೆದಿದೆ. ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್ ಮೃತ ದುರ್ದೈವಿಯಾಗಿದ್ದು, ಅರುಣ್ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಅರುಣ್ ಕುಮಾರ್ ಮಧ್ಯಾಹ್ನ ಮ್ಯಾನೇಜರ್ ಕರೆಯುತ್ತಿದ್ದಾರೆ ಎಂದು ಹೇಳಿ ಮನೆ ಬಿಟ್ಟಿದ್ದಾನೆ. ಆದರೆ, ಅರುಣ್ ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಕೆರೆಯೊಂದರ ಬಳಿ ಅರುಣ್ ಮೃತದೇಹ ಪತ್ತೆಯಾಗಿದೆ. ಅರುಣ್ ಆಗಾಗ ತಾಯಿಯ ಬಳಿ ಯುವತಿಯೊಬ್ಬಳಿಗೆ ಹಣ ಕೊಡಬೇಕು ಎಂದು ಹೇಳಿಕೊಳ್ಳುತ್ತಿದ್ದನಂತೆ. ಹಣ ಕೊಡುವುದಾಗಿ ತಾಯಿ ಭರವಸೆ ಕೊಟ್ಟಿದ್ದರು. ಆದ್ರೆ ಈಗ ಮಗ ಸಾವನ್ನಪ್ಪಿದ್ದು, ಸಾವಿನ ಬಗ್ಗೆ ತಾಯಿ ಲತಾ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments