Select Your Language

Notifications

webdunia
webdunia
webdunia
webdunia

ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು ಗೆದ್ದಿದ್ದಾರೆ

ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು ಗೆದ್ದಿದ್ದಾರೆ
shivamogga , ಬುಧವಾರ, 20 ಸೆಪ್ಟಂಬರ್ 2023 (19:58 IST)
ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಸಿಎಂ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಇನ್ನು ಈ ವಿಚಾರಕ್ಕೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು, ಆಮಿಷ ತೋರಿಸಿ ಗೆದ್ದಿದ್ದಾರೆ. ಇದನ್ನು ಚುನಾವಣಾ ಆಯೋಗ ತಕ್ಷಣ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಹೈಕಮಾಂಡ್​ ಭೇಟಿಯಾಗಲಿರುವ HDK