ಸಾಲಬಾಧೆ ತಾಳಲಾರದೆ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ
Publish Date: Thu, 11 Nov 2021 (20:13 IST)
Updated Date: Thu, 11 Nov 2021 (20:19 IST)
ಬೆಂಗಳೂರು: ಸಾಲಬಾಧೆ ತಾಳಲಾರದೆ ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದುಬಾಸಿಪಾಳ್ಯದ ನಿವಾಸಿ ಹೆಡ್ ಕಾನ್‌ಸ್ಟೇಬಲ್ ಕುಮಾರ್ (36) ಮೃತರು.
ಪಶ್ವಿಮ ವಿಭಾಗದ ಸಶಸ್ತ್ರ ವಿಭಾಗದಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿಗೆ ಸೋಮವಾರ ಕರ್ತವ್ಯಕ್ಕೆಂದು ತೆರಳಿದ್ದರು. ಯಾರೂ ಇಲ್ಲದಿರುವಾಗ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ಕಾರಣವಾಯ್ತು ಸಾಲಬಾಧೆ: ವಿಪರೀತ ಸಾಲ ಬಾಧೆಯಿಂದ ತತ್ತರಿಸಿದ್ದ ಕುಮಾರ್, ಡೆತ್ ನೋಟ್ನಲ್ಲಿಯೂ ಸಾವಿಗೆ ಸಾಲವೇ ಪ್ರಮುಖ ಕಾರಣ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ರವಾನಿಸಲಾಗಿದೆ.
ಮುಂದಿನ ಸುದ್ದಿ