ಸಾಲಬಾಧೆ ತಾಳಲಾರದೆ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

Webdunia
ಗುರುವಾರ, 11 ನವೆಂಬರ್ 2021 (20:13 IST)
ಬೆಂಗಳೂರು: ಸಾಲಬಾಧೆ ತಾಳಲಾರದೆ ಹೆಡ್ ಕಾನ್ಸ್​ಟೇಬಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದುಬಾಸಿಪಾಳ್ಯದ‌ ನಿವಾಸಿ ಹೆಡ್ ಕಾನ್‌ಸ್ಟೇಬಲ್ ಕುಮಾರ್ (36) ಮೃತರು.
ಪಶ್ವಿಮ ವಿಭಾಗದ ಸಶಸ್ತ್ರ ವಿಭಾಗದಲ್ಲಿ ಹೆಡ್ ಕಾನ್​ಸ್ಟೇಬಲ್‌ ಆಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿಗೆ ಸೋಮವಾರ ಕರ್ತವ್ಯಕ್ಕೆಂದು ತೆರಳಿದ್ದರು. ಯಾರೂ ಇಲ್ಲದಿರುವಾಗ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ಕಾರಣವಾಯ್ತು ಸಾಲಬಾಧೆ: ವಿಪರೀತ ಸಾಲ ಬಾಧೆಯಿಂದ ತತ್ತರಿಸಿದ್ದ ಕುಮಾರ್, ಡೆತ್ ನೋಟ್​ನಲ್ಲಿಯೂ ಸಾವಿಗೆ ಸಾಲವೇ ಪ್ರಮುಖ ಕಾರಣ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments