Select Your Language

Notifications

webdunia
webdunia
webdunia
webdunia

ಎಸ್ ಎಂ ಕೃಷ್ಣ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್ ಬಿಡುಗಡೆ

SM Krishna

Sampriya

ಬೆಂಗಳೂರು , ಸೋಮವಾರ, 13 ಮೇ 2024 (14:14 IST)
ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ  ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಮಾಹಿತಿ ನೀಡಿದೆ.

ಇದೀಗ ಮಣಿಪಾಲ್ ಆಸ್ಪತ್ರೆಯು ಎಸ್ ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಹೆಲ್ತ್  ಬುಲೆಟಿನ್ ಬಿಡುಗಡೆ ಮಾಡಿದ್ದು ಆರೋಗ್ಯ ಸ್ಥಿರವಾಗಿದೆ. ಸದ್ಯ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆಂದು  ಎಂದು ಹೇಳಿದೆ.  

ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.

ವಯೋಸಹಜ ಅನಾರೋಗ್ಯದಿಂದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೇ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಏ‍ಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.



Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನ ಟಿಕೆಟ್ ರದ್ದುಗೊಳಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಪ್ರಜ್ವಲ್ ರೇವಣ್ಣ