Publish Date: Fri, 04 Nov 2022 (16:52 IST)
Updated Date: Fri, 04 Nov 2022 (16:56 IST)
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.
ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಬಹಿರಂಗ ಸವಾಲು ಎಂದರು.