Select Your Language

Notifications

webdunia
webdunia
webdunia
webdunia

'ಆರೋಗ್ಯ ಸೇವೆ' ಸರ್ಕಾರದಿಂದ ಮಹತ್ವದ ನಿರ್ಧಾರ

'ಆರೋಗ್ಯ ಸೇವೆ' ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು , ಬುಧವಾರ, 18 ಆಗಸ್ಟ್ 2021 (13:04 IST)
ಬೆಂಗಳೂರು : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳ ಅನಿಯಮಿತ ವರ್ಗಾವಣೆಗೆ ಸರ್ಕಾರವು ಬ್ರೇಕ್ ಹಾಕಿದೆ. ಈ ಮೂಲಕ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ದಕ್ಷತೆ ತರುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಈ ಮೂಲಕ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮಹತ್ತರ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿನ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ 2011ರನ್ವಯ ಕೌನ್ಸಿಲಿಂಗ್ ಮೂಲಕ ಮಾತ್ರ ವರ್ಗಾವಣೆಗಳನ್ನು ಕೈಗೊಳ್ಳುವಂತೆ ಸ್ಪಷ್ಟ ಆದೇಶವಿದೆ.
ಸದರಿ ಕಾಯ್ದೆಯ ಕಲಂ 5ರಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಕೌನ್ಸಿಲಿಂಗ್ ನಿಂದ ವಿನಾಯ್ತಿಯನ್ನು ನೀಡಲಾಗಿದೆ. ಅಂತಹ ಕಡತಗಳನ್ನು ಸಚಿವರ ಅನುಮೋದನೆಗೆ ಸಲ್ಲಿಸುವುದು. ಇತರೆ ವರ್ಗಾವಣೆ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಕಡತಗಳನ್ನು ನನ್ನ ಅವಗಾಹನೆಗೆ ಸಲ್ಲಿಸತಕ್ಕದ್ದಲ್ಲ. ಆಗೊಮ್ಮೆ ನಿಯಮಗಳನ್ನು ಉಲ್ಲಂಘಿಸಿ ವರ್ಗಾವಣೆ ಕಡತಗಳು ಬಂದಿದ್ದೇ ಆದಲ್ಲಿ ಕಡತ ನಿರ್ವಹಿಸುವ ವಿಷಯ ನಿರ್ವಹಕರು ಸೇರಿದಂತೆ ಸಂಬಂಧಪಟ್ಟವರ ಎಲ್ಲರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇನ್ನೂ ಇಲಾಖೆಯ ಅಧಿಕಾರಿಗಳ ಮತ್ತು ನೌಕರರ ಹಿತದೃಷ್ಠಿಯಿಂದ ಕೌನ್ಸಿಲಿಂಗ್ ನಿಂದ ವಿನಾಯಿತಿಯನ್ನು ಕೆಲವು ವಿಶೇಷ ಪ್ರಕರಣಗಳಲ್ಲಿ ನೀಡಬೇಕಾಗಿದ್ದು, ಅದರಲ್ಲಿ ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು, ವಯೋ ನಿವೃತ್ತಿಯ ಅಂಚಿನಲ್ಲಿದ್ದು, ಇನ್ನೂ ಎರಡು ವರ್ಷಗಳ ಸೇವೆ ಮಾತ್ರ ಬಾಕಿಯಿರುವಂತವರು, ಶೇ.40ಕ್ಕೂ ಹೆಚ್ಚು ಅಂಗ ವೈಖಲ್ಯವಿರುವ ವಿಕಲಚೇತನರು. ವಿಧವೆಯರು, ಪತಿ-ಪತ್ನಿ ಪ್ರಕರಣಗಳಂತಹ ವಿಶೇಷ ಪ್ರಕರಣಗಳಿಗೆ ಸಂಬಂಧಿಸಂದೆತ ಪ್ರಸ್ತಾವನೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತವನ್ನು ಎರಡು ತಿಂಗಳುಗಳಿಗೊಮ್ಮೆ ಮಾತ್ರ ಸಚಿವರ ಅನುಮೋದನೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಕಾಯ್ದೆಯಲ್ಲಿ ಅವಶ್ಯ ತಿದ್ದುಪಡಿಯನ್ನು ತರಲು ಮುಂದಿನ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ


Share this Story:

Follow Webdunia kannada

ಮುಂದಿನ ಸುದ್ದಿ

ಉಯ್ಯಾಲೆಯೇ ಉರುಳಾಗಿ ಬಾಲಕಿ ಸಾವು