Webdunia - Bharat's app for daily news and videos

Install App

ಜಮ್ಮು-ಕಾಶ್ಮೀರ 370 ರದ್ದು ಕುರಿತ ಅರ್ಜಿಗಳ ವಿಚಾರಣೆ

Webdunia
ಗುರುವಾರ, 3 ಆಗಸ್ಟ್ 2023 (17:50 IST)
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದಿನಿಂದ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಬುಧವಾರದಿಂದ ಪ್ರತಿದಿನವೂ ವಿಚಾರಣೆ ನಡೆಸಲಿದೆ. ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿಗಳಲ್ಲದೆ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಕೂಡ ಸೇರಿದ್ದಾರೆ. ಜುಲೈ 11 ರಂದು ಪೀಠವು, ಜುಲೈ 27 ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಜೊತೆಗೆ ಈ ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಈ ಮೊದಲು ಹೇಳಿತ್ತು. ಸೋಮವಾರ ಹಾಗೂ ಶುಕ್ರವಾರ ಎರಡು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನವೂ ವಿಚಾರಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಬರೋಬ್ಬರಿ ಸುಮಾರು ನಾಲ್ಕು ವರ್ಷಗಳ ಬಳಿಕ ಈಗ ವಿಚಾರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಮುಂದಿನ ಸುದ್ದಿ
Show comments