ಬೆಂಗಳೂರು: ಮುಡಾ ಹಗರಣ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರಿಗೆ ಹೃದಯಾಘಾವಾಗಿ ಕೊನೆಯುಸಿರೆಳೆದಿರುವ ಘಟನೆ ಇಂದು ನಡೆದಿದೆ.
									
			
			 
 			
 
 			
			                     
							
							
			        							
								
																	ಮೃತ ಮಹಿಳೆಯನ್ನು ಬಸವನಗುಡಿಯ ಗೌರಮ್ಮ ಎಂದು ಗುರುತಿಸಲಾಗಿದೆ. ಬಹಿರಂಗ ಸಭೆಗೂ ಮುನ್ನ ನಡೆದು ಬರುತ್ತಿರುವಾಗ ಗೌರಮ್ಮ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇನ್ನೂ ಭಾಷಣ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೆರಳಿ ಗೌರಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ.
									
										
								
																	ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದು, ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.