ಬೆಂಗಳೂರು: ಹವಾಮಾನ ಇಲಾಖೆಯಿಂದ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಮೇರೆಗೆ ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯ ಪದವಿ ಸ್ನಾತಕೋತ್ತರ ಪದವಿ ತರಗತಿಗಳನ್ನು ಹೊರತುಪಡಿಸಿ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ಡಿ 3ರಂದು ರಜೆ ಘೋಷಿಸಿದೆ.
ಚಂಡಮಾರುತ ಪ್ರಭಾವದಿಂದಾಗಿ ಉಡುಪಿ, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಹಾಸನದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಫೆಂಗಲ್ ಸೈಕ್ಲೋನ್ ಪರಿಣಮವಾಗಿ ನಿನ್ನೆಯಿಂದ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣವಿದ್ದು, ಶೀತಗಾಳಿಯಿಂದ ಕೂಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಎಲ್ಲೆಡೆ ದಟ್ಟ ಮೋಡಗಳ ಕವಿದಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಇದರಿಂದ ಜಿಲ್ಲಾಡಳಿತ ಪದವಿ ಸ್ನಾತಕೋತ್ತರ ಪದವಿ ತರಗತಿಗಳನ್ನು ಹೊರತುಪಡಿಸಿ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ಡಿ 3ರಂದು ರಜೆ ಘೋಷಿಸಿದೆ.