Publish Date: Wed, 06 Oct 2021 (18:45 IST)
Updated Date: Wed, 06 Oct 2021 (18:49 IST)
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎರಡು ದಿನದಿಂದ ರಾಜ್ಯದ ಬಹುತೇಕ ಎಲ್ಲಾ ಕಡೆ ಭಾರಿ ಮಳೆಯಾಗುತ್ತಿದೆ. ಮಂಗಳವಾರ ದಕ್ಷಣ ಒಳನಾಡಿನಲ್ಲಿ 4 ಸೆಂ.ಮೀ. ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ನಗರದಲ್ಲೂ ಭಾರಿ ಮಳೆ:
ಬೆಂಗಳೂರಿನಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಯಲಹಂಕ, ಹೆಚ್.ಎ.ಎಲ್ ವಿಮಾನ ನಿಲ್ದಾಣದ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹೇಳಿದೆ.