Select Your Language

Notifications

webdunia
webdunia
webdunia
webdunia

ಉಕ್ಕಿ ಹರಿಯುತ್ತಿರುವ ಭಾಗಮಂಡಲ, ತ್ರಿವೇಣಿ ಸಂಗಮ: ಬೋಟ್ ಬಳಸಿ ಸಂಚಾರ

ಉಕ್ಕಿ ಹರಿಯುತ್ತಿರುವ ಭಾಗಮಂಡಲ, ತ್ರಿವೇಣಿ ಸಂಗಮ: ಬೋಟ್ ಬಳಸಿ ಸಂಚಾರ
ಕೊಡಗು , ಗುರುವಾರ, 12 ಜುಲೈ 2018 (09:11 IST)
ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ, ತ್ರಿವೇಣಿ ಸಂಗಮ ಭಾಗಮಂಡಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಐದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಭಾಗಮಂಡಲ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ-ಅಯ್ಯಂಗೇರಿ ವಾಹನ ಸಂಚಾರ ಕಡಿತಗೊಂಡಿದೆ.  ಬೋಟ್ ಬಳಸಿ ಅಲ್ಲಿನ ನಾಗರಿಕರಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ.

ಮಡಿಕೇರಿ-ಭಾಗಮಂಡಲ ಮಾರ್ಗದ ರಸ್ತೆಯಲ್ಲಿ ನೀರು ಹೆಚ್ಚಳವಾಗಿದೆ. ಭಾಗಮಂಡಲದಲ್ಲಿ ನುರಿತ ಈಜು ತಜ್ಞರು, ಗೃಹ ರಕ್ಷಕದಳದ ಸಿಬ್ಬಂದಿಗಳು ಮೊಕ್ಕಂ ಹೂಡಿದ್ದು, ಪ್ರವಾಹ ಹೆಚ್ಚಾದ ಸಂದರ್ಭದಲ್ಲಿ ಬೋಟ್ ಬಳಸಿ ಅಲ್ಲಿನ ಜನರು ಹಾಗೂ ಪ್ರವಾಸಿಗರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ.         ಕೊಡಗಿನ ದಕ್ಷಿಣ ಭಾಗದಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ವ್ಯಾಪಕ ಮಳೆಯಿಂದಾಗಿ ತಿತಿಮತಿ ರಸ್ತೆಯು ಹದಗೆಟ್ಟಿದ್ದು, ಸರಿಪಡಿಸಿ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

ಪೆರುಂಬಾಡಿ-ಮಾಕುಟ್ಟ ರಸ್ತೆ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸುತ್ತಿವೆ. ಹೀಗೆ ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವುದರಿಂದ ಮಳೆಗೆ ಜನರ ಬದುಕು ದುಸ್ತರವಾಗಿದೆ. ಸಂಚಾರ ಹಾಗೂ ಜನಜೀವನ ಪರಿಸ್ಥಿತಿ ಅಸ್ತವ್ಯಸ್ಥ ಉಂಟಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಸುಗಮ ಸಂಚಾರ ಹಾಗೂ ಜನಜೀವನಕ್ಕೆ ಅಗತ್ಯ ಕ್ರಮಕೈಗೊಂಡಿದೆ.  ಮಡಿಕೇರಿ-ಭಾಗಮಂಡಲ ಮಾರ್ಗದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಬೋಟು ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಸಂಬಂಧಪಟ್ಟ ಸಿಬ್ಬಂದಿ ನಿಯೋಜಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಖಡಕ್ ಪತ್ರ!