Publish Date: Thu, 12 Oct 2017 (09:15 IST)
Updated Date: Thu, 12 Oct 2017 (09:17 IST)
ಕಲಬುರ್ಗಿ: ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಇದರಿಂದಾಗಿ ಜಲಾನಯನ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಭೂಸನೂರು ಗ್ರಾಮದ ಸಮೀಪವಿರುವ ಅಮರ್ಜಾ ಜಲಾಶಯ ಭರ್ತಿಯಾಗಿದ್ದು, ಒಳಹರಿವು ಹೆಚ್ಚಳವಾಗಿದೆ.
ಅಮರ್ಜಾ ಜಲಾಶಯದಲ್ಲಿ ಅಪಾಯಮಟ್ಟ ಮೀರಿ ನೀರು ಹರಿಯುತ್ತಿದ್ದು, 6೦೦ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗಿದೆ. ನೀರಿನ ಹೊರಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ನದಿಪಾತ್ರದ ಹಳ್ಳಿಗಳ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.