ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇಂದೂ ಮಳೆಯ ಅಬ್ಬರ ಮುಂದುವರಿದಿದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಸುತ್ತಮುತ್ತಲಿನ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
 
ಕೆಆರ್ ಎಸ್  ಅಣೆಕಟ್ಟು ಸುತ್ತಮುತ್ತ ಜನರನ್ನು ತೆರವುಗೊಳಿಸಲಾಗುತ್ತಿದೆ. ಯಾರೂ ಇಲ್ಲಿ ಓಡಾಡದಂತೆ ಸೂಚಿಸಲಾಗಿದೆ. ಇಷ್ಟೇ ಅಲ್ಲದೆ, ನಿಮಿಷಾಂಬ ದೇವಾಲಯದ ಸುತ್ತಮುತ್ತವೂ ನೀರಿನ ಮಟ್ಟ ಹೆಚ್ಚಳವಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
									
			
			 
 			
 
 			
			                     
							
							
			        							
								
																	ಇನ್ನು, ಮಂಗಳೂರು, ಉಡುಪಿ, ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದ್ದು, ಪ್ರವಾಹ ಸ್ಥಿತಿ ಇದೆ. ಇಂದೂ ಕೂಡಾ ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಡೆಬಿಡದೇ ಸುರಿಯುತ್ತಿರುವ ಮಳೆ-ಗಾಳಿಯಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.
									
										
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.