Publish Date: Thu, 17 Jun 2021 (10:54 IST)
Updated Date: Thu, 17 Jun 2021 (10:56 IST)
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.
ಚಿಕ್ಕಮಗಳೂರು, ಕೊಡಗು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ.
ಕೊಡಗಿನಲ್ಲಿ ಭಾರೀ ಮಳೆಗೆ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕಳೆದ ವರ್ಷವೂ ಮಳೆ ಈ ಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಈ ಬಾರಿಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಹೇಳಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿರುವುದಾಗಿ ವರದಿಯಾಗಿದೆ.