ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಮಾತ್ರವಲ್ಲ, ಕೇರಳದಲ್ಲಿ ಮಳೆ ಅಬ್ಬರಿಸುತ್ತಿದೆ. ಕೇರಳದ ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅನಿಲ್ ಕುಂಬ್ಳೆ ತವರು ಕಾಸರಗೋಡಿನ ಕುಂಬಳೆಯ ರಸ್ತೆಯೊಂದರ ದೃಶ್ಯ ಇಲ್ಲಿನ ಮಳೆಯ ಅಬ್ಬರಕ್ಕೆ ಸಾಕ್ಷಿಯಾಗಿದೆ.
ಕೇರಳದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದೂ ಕೂಡಾ ಭಾರೀ ಮಳೆ ಮುಂದುವರಿದಿದೆ. ಪರಿಣಾಮ ರಸ್ತೆಗಳೆಲ್ಲವೂ ಜಲಾವೃತವಾಗಿದೆ. ಇಂದು ಗಡಿನಾಡು ಕಾಸರಗೋಡು ಸೇರಿದಂತೆ ಕೇರಳದ ನಾಲ್ಕು ಜಿಲ್ಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾಸರಗೋಡು ಅಲ್ಲದೆ, ತ್ರಿಶ್ಶೂರ್, ಪಾಲಕ್ಕಾಡ್, ಆಲಪ್ಪುಳ, ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಸರಗೋಡು, ಮಲಪ್ಪುರ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಡಲ ತೀರಗಳಿಗೆ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಕಾಸರಗೋಡಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಕುಂಬಳೆಯಲ್ಲಿ ರಸ್ತೆಯಲ್ಲಿ ನೀರು ತುಂಬಿ ಸ್ವಿಮ್ಮಿಂಗ್ ಪೂಲ್ ನಂತಾಗಿದೆ. ಇಲ್ಲಿ ಈಗ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ರಸ್ತೆಯಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿತ್ತು. ಈ ವಿಡಿಯೋ ಇಲ್ಲಿದೆ ನೋಡಿ.