Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ; ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ; ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ
ಬೆಳಗಾವಿ , ಭಾನುವಾರ, 4 ಆಗಸ್ಟ್ 2019 (10:29 IST)
ಬೆಳಗಾವಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಹೊರಬಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.




ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, 6 ಗೇಟ್‍ಗಳಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಇದರಿಂದ ಉತ್ತರ ಕರ್ನಾಟಕದ ಕೃಷ್ಣಾ ನದಿ ತೀರದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಯ ಜನರಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ.


ಬೆಳಗಾವಿ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಚಿಕ್ಕೋಡಿಗೆ ಮಿಲಿಟರಿ ಪಡೆ ಆಗಮಿಸಿದೆ. ರಾಯಚೂರಿನಲ್ಲಿ ಸಹ ಪ್ರವಾಹ ಭೀತಿ ಹೆಚ್ಚಾಗಿದೆ. ಅಬ್ಬರದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಚೆ ಕಚೇರಿಯಲ್ಲಿ ಇ-ಕಾಮರ್ಸ್ ಪೋರ್ಟಲ್ ಶುರು ಮಾಡಲಿದೆ ಕೇಂದ್ರ ಸರ್ಕಾರ