Select Your Language

Notifications

webdunia
webdunia
webdunia
webdunia

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳು ಭಾರಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳು ಭಾರಿ ಮಳೆ
bangalore , ಸೋಮವಾರ, 8 ನವೆಂಬರ್ 2021 (19:31 IST)
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಮಾಹಿತಿ ನೀಡಿದೆ.
 
ಎಲ್ಲೆಲ್ಲಿ ಯೆಲ್ಲೋ ಅಲರ್ಟ್: 
 
 
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದೆ ಹೀಗಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.
 
ಕರಾವಳಿ ಜಿಲ್ಲೆಗಳಲ್ಲಿ ಮಳೆ: 
 
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಅಂದಾಜಿಸಿದೆ.
 
ಉತ್ತರದಲ್ಲಿ ಒಣ ಹವೆ: 
 
ಉತ್ತರ ಒಳನಾಡಿ ಬಹುತೇಕ ಕಡೆ ಒಣ ಹವೆ ಮುಂದುವರೆಯಲಿದ್ದು. ಕೆಲವು ಕಡೆ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
 
ಬೆಳಗಿನಿಂದ ನಗರದಲ್ಲಿ ಮಳೆ: 
 
ಬೆಂಗಳೂರು ನಗರದಲ್ಲಿ ಸೋಮವಾರ ಮುಂಜಾನೆಯೇ ಜಿಟಿ ಜಿಟಿ ಮಳೆಯಾಗುತ್ತಿದೆ. ಕೆ,ಆರ್ ಪುರಂ, ರಾಜಾಜಿನಗರ, ಮಲೇಶ್ವರಂ ಸೇರಿದಂತೆ ನಗರದ ಹಲವೆಡೆ ತುಂತುರು ಮಳೆ ಬಿದ್ದಿದ್ದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹ್ಯಾಕರ್​ ಶ್ರೀಕಿ ನನಗೂ ಸಂಭಂದವಿಲ್ಲ-ವಿಷ್ಣು ಭಟ್ ಹೊಸ ಕಥೆ