Publish Date: Wed, 13 Sep 2023 (20:00 IST)
Updated Date: Wed, 13 Sep 2023 (19:54 IST)
ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಸೆಪ್ಟೆಂಬರ್ 16-17ರಂದು ಅತ್ಯಧಿಕ ಮಳೆ ಸುರಿಯಲಿದೆ.