Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ

Heavy rain is likely for 3 days in the state
bangalore , ಸೋಮವಾರ, 10 ಅಕ್ಟೋಬರ್ 2022 (19:37 IST)
ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು ನಗರ ಸೇರಿದಂತೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಸೂಚನೆ ನೀಡಿದೆ. ಇಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಆಕ್ಟೋಬರ್​​​ 11 ಮತ್ತು 12ರಂದು ಕರಾವಳಿ ಹೊರತುಪಡಿಸಿ ಉಳಿದ ಕಡೆ ವ್ಯಾಪಕ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ 15 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಈ ನಡುವೆ, ಭಾನುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರದಿಂದ ಕೂಡಿದ ಮಳೆಯಾದರೆ, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣ ಹವೆ ಇತ್ತು.

Share this Story:

Follow Webdunia kannada

ಮುಂದಿನ ಸುದ್ದಿ

‘ಬಿಜೆಪಿಯವರು ನನ್ನನ್ನು ರಹಸ್ಯವಾಗಿ ಭೇಟಿಯಾಗ್ತಾರೆ’