Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ..!

ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ..!
bangalore , ಭಾನುವಾರ, 16 ಅಕ್ಟೋಬರ್ 2022 (16:20 IST)
ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದೆ. ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ. 18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್​ ನೀಡಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ ಪ್ಲಾಫ್‌ ಆಗಿದೆ’