Select Your Language

Notifications

webdunia
webdunia
webdunia
webdunia

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

Meteorological Department

sampriya

ಬೆಂಗಳೂರು , ಬುಧವಾರ, 30 ಅಕ್ಟೋಬರ್ 2024 (13:59 IST)
photo credit X
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆಯ ಅಬ್ಬರ ತಗ್ಗಿದೆ. ಆದರೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1, 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.

ನಾಳೆ ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ನವೆಂಬರ್‌1– 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ನಮ್ಮ ಪಾಲಿನ ತೆರಿಗೆ ಕೊಡ್ತಿಲ್ಲ ಎಂದು ಆರೋಪಿಸುವ ಡಿಕೆ ಶಿವಕುಮಾರ್ ಜಯನಗರಕ್ಕೆ ಮಾಡಿದ್ದೂ ಅದನ್ನೇ ಅಲ್ವಾ