Publish Date: Sun, 28 Aug 2022 (17:26 IST)
Updated Date: Sun, 28 Aug 2022 (17:28 IST)
ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ 7 ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.