Publish Date: Fri, 01 Sep 2023 (15:53 IST)
Updated Date: Fri, 01 Sep 2023 (16:55 IST)
ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.