Publish Date: Sun, 08 Sep 2024 (13:26 IST)
Updated Date: Sun, 08 Sep 2024 (13:29 IST)
ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶನಿವಾರ ರಾಜ್ಯದ ಹಲವೆಡೆ ಮಳೆಯಾಗಿದ್ದು, ಇಂದು ಕೂಡಾ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ.
ಹವಾಮಾನ ಇಲಾಖೆ ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 ಕಿಮೀ) ಬರುವ ಸಾಧ್ಯತೆಯಿದೆ.