Select Your Language

Notifications

webdunia
webdunia
webdunia
webdunia

ಭಾರಿ ಮಳೆ ಸಾಧ್ಯತೆ, ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಭಾರಿ ಮಳೆ ಸಾಧ್ಯತೆ, ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

sampriya

ತಿರುವನಂತಪುರ , ಬುಧವಾರ, 22 ಮೇ 2024 (18:15 IST)
Photo By X
ತಿರುವನಂತಪುರ: ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ  ಹಿನ್ನೆಲೆ ಕೇರಳ ರಾಜ್ಯದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಈಗಾಗಲೇ ಈ ಎರಡು ಜಿಲ್ಲೆಗಳಿಗೆ ಈಗಾಗಲೇ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ, ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿರುವುದರಿಂದ ರೆಡ್ ಅಲರ್ಟ್‌ ನೀಡಲಾಗಿದೆ. 

ಇನ್ನುಳಿದಂತೆ ತಿರುವನಂತಪುರ, ಕೊಲ್ಲಂ, ಆಳಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್‌, ಮಲಪ್ಪುರಂ, ಕೋಯಿಕ್ಕೊಡ್‌ ಮತ್ತು ವಯನಾಡಿಗೆ ಆರಂಜ್‌ ಅಲರ್ಟ್‌ ನೀಡಲಾಗಿದ್ದು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನೂ ರಾಜ್ಯದಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಸಾಂಕ್ರಾಮಿಕ ರೋಗಗಳ ಹರಡುವಿಕೆ ತಪ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಮ್ಮ ಅಮ್ಮನಾಗಿಲ್ಲ, ಅಪ್ಪ ಮನೆಗೆ ಸೇರಿಸಿಲ್ಲ: ತಂದೆ ವಿರುದ್ಧ ನಿಶಾ ಯೋಗೇಶ್ವರ್‌ ಗಂಭೀರ ಆರೋಪ