Publish Date: Tue, 15 Aug 2017 (10:26 IST)
Updated Date: Tue, 15 Aug 2017 (11:54 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು , ಜನರು ರಾತ್ರಿಯಿಡೀ ನಿದ್ದೆಗೆಡುವಂತಾಯಿತು. ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಕೆಲವೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಗೂ ಅಡ್ಡಿಯಾಗಿದೆ.
ಶಾಂತಿ ನಗರ, ಮಡಿವಾಳ, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ವಿಪರೀತ ಮಳೆಯಾಗಿದ್ದು, ವಾಹನ ದಟ್ಟಣೆ ಉಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಇದೀಗ ವರುಣ ಕೊಂಚ ಬಿಡುವು ತೋರಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ.