Publish Date: Thu, 11 Nov 2021 (14:06 IST)
Updated Date: Thu, 11 Nov 2021 (14:10 IST)
ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ. ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 11 ರಂದು ಯೆಲ್ಲೋ ಅಲರ್ಟ್, ನವೆಂಬರ್ 12ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 2 ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.