Select Your Language

Notifications

webdunia
webdunia
webdunia
webdunia

ಮಲೆನಾಡಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ. ಘೋಷಣೆ

ಮಲೆನಾಡಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ. ಘೋಷಣೆ
ಚಿಕ್ಕಮಗಳೂರು , ಮಂಗಳವಾರ, 6 ಆಗಸ್ಟ್ 2019 (10:21 IST)
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜನ ಜಾನುವಾರುಗಳು ಪರದಾಡುವಂತಾಗಿದೆ.



ಸೋಮವಾರ ರಾತ್ರಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

 

ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ. ಮಹಾ ಮಳೆ, ಪ್ರವಾಹ ಹಿನ್ನೆಲೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಗೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ