Select Your Language

Notifications

webdunia
webdunia
webdunia
webdunia

ಮಹಾಮಳೆ: ನಾಳೆಯೂ ಉಡುಪಿ ಜಿಲ್ಲೆಯ ಶಾಲೆ, ಪಿಯುಗೆ ರಜೆ

Udupi District Heavy Rain

Sampriya

ಉಡುಪಿ , ಗುರುವಾರ, 1 ಆಗಸ್ಟ್ 2024 (20:17 IST)
ಉಡುಪಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿಯಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಿದ್ದು, ಮುಂಜಾಗೃತ ಕ್ರಮವಾಗಿ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಘೋಷಣೆ ಮಾಡಿದ್ದು,  ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐಗಳಿಗೆ ಎಂದಿನಂತೆ ಕಾಲೇಜು ಇರಲಿದೆ. ಈ ಎಲ್ಲಾ ಶಿಕ್ಷಣ ಸಂಸ್ಥೆಗಳು ಎಂದಿನಂತೆ ನಡೆಯುತ್ತವೆ.

ಇನ್ನೂ ಭಾರೀ ಮಳೆ ಹಿನ್ನೆಲೆ ಇಂದು ಕೂಡಾ ಉಡುಪಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಬುಧವಾರವೂ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರದಿಂದ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಮುಳ್ಳಾಗಿ ಕಾಡುತ್ತಿರುವ ಕುಮಾರಸ್ವಾಮಿ: ಕಾಂಗ್ರೆಸ್