Publish Date: Mon, 06 Jun 2022 (19:22 IST)
Updated Date: Mon, 06 Jun 2022 (20:20 IST)
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸುವ ಕುರಿತು ಎಚ್ಚರಿಕೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಿದ್ದು. ಬೆಂಗಳೂರು ಅಷ್ಟೇ ಅಲ್ಲದೇ ರಾಮನಗರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ.