Select Your Language

Notifications

webdunia
webdunia
webdunia
webdunia

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ಗಾಂಧಿ ಪ್ರತಿಭಟನೆಗೆ ಎಚ್‌ಡಿಕೆ ಕಿಡಿ

Congress leader Rahul Gandhi, Union Minister H.D. Kumaraswamy, Congress massive protest

Sampriya

ನವದೆಹಲಿ , ಶುಕ್ರವಾರ, 8 ಆಗಸ್ಟ್ 2025 (11:24 IST)
Photo Credit X
ನವದೆಹಲಿ: ಚುನಾವಣೆ ಆಯೋಗದ ವಿರುದ್ಧ ತೊಡೆತಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನಾ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ ಎಂದು ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​