Webdunia - Bharat's app for daily news and videos

Install App

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ಗಾಂಧಿ ಪ್ರತಿಭಟನೆಗೆ ಎಚ್‌ಡಿಕೆ ಕಿಡಿ

Sampriya
ಶುಕ್ರವಾರ, 8 ಆಗಸ್ಟ್ 2025 (11:24 IST)
Photo Credit X
ನವದೆಹಲಿ: ಚುನಾವಣೆ ಆಯೋಗದ ವಿರುದ್ಧ ತೊಡೆತಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನಾ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ ಎಂದು ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments