Publish Date: Mon, 03 Aug 2026 (20:01 IST)
Updated Date: Mon, 03 Aug 2026 (20:05 IST)
ಬೆಂಗಳೂರು: ಬಹುದಿನಗಳಿಂದ ಭಾರೀ ಕುತೂಹಲವನ್ನು ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಲೋಕಭವನದಲ್ಲಿನಡೆಯಿತು.
19 ಶಾಸಕರು ಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರಾಗಿ ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಆ ಬಳಿಕ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಗೆ ಜಾಕ್‌ಪಾಟ್; ಅಜಯ್ ಸಿಂಗ್‌ಗೆ ಸಚಿವ ಸ್ಥಾನ, ಭಾವುಕರಾಗಿ ಕಣ್ಣೀರಿಟ್ಟ ತಾಯಿ
ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್ ಅವರ ಹೆಸರು ಘೋಷಣೆ ಮಾಡಲಾಗಿದೆ.
ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರು ಪ್ರಕಟಿಸಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ