ಅಗ್ಗದ ದರದಲ್ಲಿ ಮೈಸೂರು ರೇಷ್ಮೆ ಸೀರೆಗಳು ಇಲ್ಲಿವೆ!

Webdunia
ಬುಧವಾರ, 26 ಡಿಸೆಂಬರ್ 2018 (13:48 IST)
ರೇಷ್ಮೆ ಸೀರೆ ಎಂದರೆ ಯಾವ ಮಹಿಳೆಯರಿಗೆ ಇಷ್ಟವಾಗೋದಿಲ್ಲ ಹೇಳಿ. ಇನ್ನು ವೆರೈಟಿ ಹಾಗೂ ಹೊಸ ಮಾಡೆಲ್ ರೇಷ್ಮೆ ಸೀರೆಗಳು ನಿಮಗೆ ಬೇಕಾದ್ರೆ ಇಲ್ಲಿಗೆ ಒಮ್ಮೆ ಭೇಟಿ ನೀಡಿ.

ಕಲಬುರಗಿ ನಗರದಲ್ಲಿ ಕೆ.ಎಸ್.ಐ.ಸಿ. ವತಿಯಿಂದ ಮೈಸೂರು ರೇಷ್ಮೆ ಸೀರೆಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ವರ್ಷದ ಮಾರಾಟ ಮೇಳದಲ್ಲಿ ಕಡಿಮೆ ಬೆಲೆಯಲ್ಲಿ ಮೈಸೂರು ರೇಷ್ಮೆ ಸೀರೆಗಳನ್ನು ಮಾರಾಟ ಮಾಡಲಾಗುತ್ತಿದ್ದು,  ನಾಗರಿಕರು ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.

 ಕಲಬುರಗಿ ನಗರದ ವಲ್ಲಭಭಾಯಿ ಪಟೇಲ ವೃತ್ತದ ಹತ್ತಿರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿರುವ ಮೈಸೂರು ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿ, ಡಿಸೆಂಬರ 28 ರವರೆಗೆ ನಾಲ್ಕು ದಿನಗಳ ಕಾಲ ಮೈಸೂರು ರೇಷ್ಮೆ ಸೀರೆಗಳ ಮಾರಾಟ ಮೇಳ ನಡೆಯಲಿದೆ. ಈ ಬಾರಿ ಮಧ್ಯಮ ಮತ್ತು ಬಡ ಜನರು ಸಹ ಮೈಸೂರು ರೇಷ್ಮೆ ಸೀರೆಗಳನ್ನು ಕೊಂಡುಕೊಳ್ಳಬೇಕೆಂಬ ಉದ್ದೇಶದಿಂದ ಮೊಟ್ಟ ಮೊದಲ ಬಾರಿಗೆ ಜರಿ ಹೊಂದಿರದ ಮೈಸೂರು ರೇಷ್ಮೆ ಸೀರೆಗಳನ್ನು ಕನಿಷ್ಟ 5500 ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದರು.

          ಕೆ.ಎಸ್.ಐ.ಸಿ.ಯಿಂದ ಮಾರಾಟ ಮಾಡುವ ಸೀರೆಗಳು ಉನ್ನತ ದರ್ಜೆಯ ರೇಷ್ಮೆಯಿಂದ ತಯಾರಿಸಲ್ಪಟ್ಟಿವೆ. ಈ ಸಂಸ್ಥೆಯ ರೇಷ್ಮೆ ಸೀರೆಗಳಿಗೆ ಜಿ.ಐ.ಟ್ಯಾಗ ದೊರೆತಿದ್ದು, ಕಲಬುರಗಿಯಲ್ಲಿ ಮಾರಾಟ ಮಾಡುತ್ತಿರುವ ರೇಷ್ಮೆ ಉತ್ಪನ್ನಗಳ ಮೇಲೆ 25 ರಿಂದ 30 ರಷ್ಟು ರಿಯಾಯಿತಿ ನೀಡುತ್ತಿದ್ದಾರೆ. ಸಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೇ ನಾಜೂಕಾದ ವಿನ್ಯಾಸದ ಸಂಗ್ರಹಿತ “ಕ್ರೇಪ್ ಡಿಜೈನ್ ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು, ಟೈ, ಸ್ಕಾರ್ಪ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments