Publish Date: Sat, 28 Aug 2021 (17:28 IST)
Updated Date: Sat, 28 Aug 2021 (19:55 IST)
ಬೆಂಗಳೂರು: ಬಂಗಾಳ ಉಪಸಾಗರದ ಒರಿಸ್ಸಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇ
ಶವಿದೆ. ಇದರ ಪ್ರಭಾವದಿಂದ ರಾಜ್ಯಾಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಆ.29ರಿಂದ ಸೆ.1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಾಂಶ 27 ಹಾಗೂ ಕನಿಷ್ಠ ಉಷ್ಣಾಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ. ಆ.29ರಂದು ಆರೆಂಜ್ ಅಲರ್ಟ್ ಹಾಗೂ ಆ.30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಆ.29 ಹಾಗೂ 30ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಶನಿವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ 13 ಸೆಂ.ಮೀ., ದಕ್ಷಿಣ ಕನ್ನಡದ ಸುಬ್ರಹ್ಮಣ್ಯಯಲ್ಲಿ 10 ಸೆಂ.ಮೀ., ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂ.ಮೀ., ಉಡುಪಿಯ ಕಾರ್ಕಳ, ಕೊಡಗಿನ ಭಾಗಮಂಡಲದಲ್ಲಿ ತಲಾ 7 ಸೆಂ.ಮೀ., ದಕ್ಷಿಣ ಕನ್ನಡದ ಮಣಿ, ಉತ್ತರ ಕನ್ನಡದ ಶಿರಾಲಿ, ಚಿಕ್ಕಮಗಳೂರಿನ ಕೊಟ್ಟಿಿಗೆಹಾರದಲ್ಲಿ ತಲಾ 6 ಸೆಂ.ಮೀ., ಮಂಗಳೂರು, ದಕ್ಷಿಣ ಕನ್ನಡದ ಸುಳ್ಯ, ಉತ್ತರ ಕನ್ನಡ ಭಟ್ಕಳ, ಮಂಕಿ ಹಾಗೂ ಕದ್ರಾಾ, ಉಡುಪಿಯ ಕುಂದಾಪುರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.