Select Your Language

Notifications

webdunia
webdunia
webdunia
webdunia

ಡಿಕೆಶಿ ತವರು ಜಿಲ್ಲೆಯಲ್ಲಿ ಹೈ ಅಲರ್ಟ್

High alert in Dkeshi's home district
ramanagara , ಬುಧವಾರ, 17 ಮೇ 2023 (18:54 IST)
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ. ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ 6 ಕೆಎಸ್​ಆರ್​ಪಿ ತುಕಡಿ ಆಗಮನವಾಗಿದ್ದು, ಫುಲ್ ಬಂದೋಬಸ್ತ್​ ಮಾಡಲಾಗಿದೆ. ಈ ಹಿಂದೆ ಡಿಕೆ ಶಿವಕುಮಾರ್ ಅವರು ಜೈಲಿಗೆ ಹೋದ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಹಿತಕರ ಘಟನೆಗಳು ನಡೆದಿದ್ದವು. ಇದೀಗ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಗಲಾಟೆಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಪೊಲೀಸರ ಅಲರ್ಟ್ ಆಗಿದ್ದಾರೆ.ಇತ್ತ ಡಿಕೆಶಿ ಬ್ರದರ್ಸ್‌ ಮಾತ್ರ ಕ್ಷೇತ್ರದಲ್ಲಿ ಯಾವುದೇ ಪ್ರತಿಭಟನೆ, ಗಲಾಟೆ ಮಾಡಬಾರದು, ಪಕ್ಷದ ಗೌರವಕ್ಕೆ ಧಕ್ಕೆ ತರಬಾರದೆಂದು ಸೂಚನೆ ಕೊಟ್ಟಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿಗೆ ಬಿಗ್‌ ರಿಲೀಫ್‌