Select Your Language

Notifications

webdunia
webdunia
webdunia
webdunia

ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್!?

ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್!?
ಮಂಡ್ಯ , ಗುರುವಾರ, 2 ಜೂನ್ 2022 (08:06 IST)
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರೌವೃತ್ತವಾಗಿವೆ.

ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು, ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ.

ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್ಪಿ ಮನವಿ ಸಲ್ಲಿಸಿತ್ತು.

ಜಿಲ್ಲಾಧಿಕಾರಿಗಳು ಈ ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್ಪಿ ಹಾಗೂ ಭಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾನ್ ಆಗುತ್ತಾ ಪಿಎಫ್ಐ?