Publish Date: Mon, 25 May 2026 (09:37 IST)
Updated Date: Mon, 25 May 2026 (09:40 IST)
ಬೆಂಗಳೂರು: ನಾಯಕತ್ವ ಬದಲಾವಣೆ, ಸಂಪುಟ ಪುನರಾರಚನೆ ಕಸರತ್ತು ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯರನ್ನು ದೆಹಲಿಗೆ ಕರೆದಿರುವ ಬಗ್ಗೆ ಪ್ರತಿಕ್ರಿಯೆ ಕೇಳಿದರೆ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ.
ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಯಬಹುದು ಎಂದು ನಿರೀಕ್ಷೆಗಳಿತ್ತು. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರಲು ಸೂಚನೆ ನೀಡಲಾಗಿದೆ. ಆದರೆ ಡಿಕೆ ಶಿವಕುಮಾರ್ ಗೆ ಇನ್ನೂ ಕರೆ ಬಂದಿಲ್ಲ.
ಈ ಹಿನ್ನಲೆಯಲ್ಲಿ ಮಾಧ್ಯಮಗಳು ಅವರನ್ನು ಪ್ರಶ್ನೆ ಮಾಡಿದಾಗ ಸಿಎಂ ಸಿದ್ದರಾಮಯ್ಯನವರನ್ನು ದೆಹಲಿಗೆ ಕರೆದಿರುವ ವಿಚಾರ ನನಗೆ ಗೊತ್ತಿಲ್ಲ. ರಾಜ್ಯಸಭೆ ಚುನಾವಣೆ ವಿಚಾರಕ್ಕೆ ಕರೆದಿದ್ದಾರೋ, ನಾಯಕತ್ವ ವಿಚಾರಕ್ಕೆ ಕರೆದಿದ್ದಾರೋ ನನಗೆ ಗೊತ್ತಿಲ್ಲ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡಿದರೂ ಡಿಕೆ ಶಿವಕುಮಾರ್ ಗೂ ಹೈಕಮಾಂಡ್ ನಿಂದ ಬುಲಾವ್ ಸಿಕ್ಕಿದೆ ಎಂಬ ಸುದ್ದಿಗಳಿವೆ. ಈ ಬಗ್ಗೆ ಅವರು ತಮ್ಮ ಸಹೋದರ ಡಿಕೆ ಸುರೇಶ್ ಜೊತೆ ಗಹನವಾದ ಚರ್ಚೆ ನಡೆಸಿದ್ದಾರೆ. ಆದರೆ ಇದು ಯಾವುದರ ಬಗ್ಗೆಯೂ ಅವರು ಮಾಧ್ಯಮಗಳ ಜೊತೆ ಗುಟ್ಟು ಬಿಟ್ಟುಕೊಟ್ಟಿಲ್ಲ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ