Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆಗೆ ನಿಲ್ಲಿಸಲು ಹೈಕಮಾಂಡ್ ಪ್ಲ್ಯಾನ್?

ಲೋಕಸಭಾ ಚುನಾವಣೆಗೆ ನಿಲ್ಲಿಸಲು ಹೈಕಮಾಂಡ್ ಪ್ಲ್ಯಾನ್?
ಬೆಂಗಳೂರು , ಮಂಗಳವಾರ, 1 ಆಗಸ್ಟ್ 2023 (14:04 IST)
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿತರುವ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

ಹೀಗಾಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೆಟ್ಟರ್ ಅವರ ವರ್ಚಸ್ ಬಳಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಪ್ಲ್ಯಾನ್ ಮಾಡಿದೆ. ಹೀಗಾಗಿ ಈ ಮಹತ್ವದ ಸಭೆಗೆ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ಜಗದೀಶ್ ಶೆಟ್ಟರ್ ಅವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಳಿಸಲು ಚಿಂತನೆ ನಡೆಸಿದೆ. ಬೆಳಗಾವಿ ಕ್ಷೇತ್ರದಿಂದ ಕಣಕ್ಕಳಿಸಬೇಕೋ ಅಥವಾ ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ನಿಲ್ಲಿಸಬೇಕೋ ಎನ್ನುವ ಬಗ್ಗೆ ಚರ್ಚೆ ನಡೆಸಿದೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಜೊತೆ ಫೋನ್ನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ!