Webdunia - Bharat's app for daily news and videos

Install App

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

Sampriya
ಬುಧವಾರ, 11 ಜೂನ್ 2025 (14:29 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟ ಸಂದೇಶ ರವಾನಿಸಿದೆ. 

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ನಿರ್ಧರಿಸಿದಾಗ ತಿಳಿಸುತ್ತೇವೆ ಎಂದು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಭಿ ಮಾಡುತ್ತಿರುವುವರಿಗೆ ಆಘಾತ ನೀಡಿದ್ದಾರೆ. 

ಕಲಬುರಗಿಯಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಪಪಡಿಸಿದರು.

ಕಾಂಗ್ರೆಸ್‌ ಶಾಸಕರ ಮನೆ ಮೇಲೆ ಇಡಿ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸದ ಅವರು, ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ಒಡೆಯುವುದು ಎನ್‌ಡಿಎಯ ಪ್ರಮುಖ ಉದ್ದೇಶವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರುವುದರಿಂದ ಅದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments