Publish Date: Mon, 30 Dec 2019 (20:29 IST)
Updated Date: Mon, 30 Dec 2019 (20:31 IST)
ಅನರ್ಹ ಶಾಸಕರಲ್ಲಿ ಬಹುತೇಕರು ಅರ್ಹರಾಗಿ ತಿಂಗಳುಗಳೇ ಕಳೆಯುತ್ತಿವೆ. ಈ ನಡುವೆ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯಂತೆ.
ಸಂಕ್ರಾಂತಿ ಹಬ್ಬದ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಪಕ್ಷದ ವರಿಷ್ಠರು ಇದಕ್ಕೆ ಸಮ್ಮತಿಸಿದ್ದಾರೆ. ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಸಂಪುಟ ವಿಸ್ತರಣೆ ಆಗುತ್ತೆ ಅಂತ ಹೇಳಿದ್ರು.