Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ ಹಾಕಿದ ಹೈಕೋರ್ಟ್‌

Sampriya
ಶುಕ್ರವಾರ, 5 ಜುಲೈ 2024 (19:58 IST)
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಎರಡು ವಾರಗಳ ಕಾಲ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ನೇತೃತ್ವದ ನ್ಯಾಯ ಪೀಠ ಅರ್ಜಿ ವಿಚಾರಣೆಯನ್ನು ನಡೆಸಿ, ಈ ಅರ್ಜಿ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದೆ.

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ಪರ ವಕೀಲರು, ಈ ಪ್ರಕರಣವನ್ನು ತ್ವರಿತಗತಿಯಲ್ಲಿ ಪರಿಶೀಲಿಸುವಂತೆ ನ್ಯಾಯ ಪೀಠಕ್ಕೆ ಮನವಿ ಮಾಡಿದರು.

ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯ ಪೀಠ, ಜಾಮೀನು ಅರ್ಜಿಯನ್ನು ಈಗ ಪರಿಶೀಲಿಸುವ ಅಗತ್ಯವಿಲ್ಲ. ತನಿಖೆ ಮುಂದುವರಿಯಲಿ, ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳಿತು.

ಈ ಹಿಂದೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನೂ ಯುವಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಪ್ರಜ್ವಲ್ ಅವರ ಸಹೋದರ, ಜೆಡಿಎಸ್ (ಎಸ್) ಎಂಎಲ್ ಸಿ ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ