Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ..!!!

ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ..!!!
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2022 (14:17 IST)

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕೋರಮಂಗಲದ ವಿಜಯನ್ ಮೆನನ್ ಸೇರಿ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, '2022ರ ಸೆಪ್ಟೆಂಬರ್ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಅತಿಕ್ರಮಣ ತೆರವುಗೊಳಿಸಬೇಕಾಗಿದೆ' ಎಂದರು. ಇದೇ ವರದಿಯಲ್ಲಿ, 'ನಗರದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಹಾಟ್ ಮಿಕ್ಸ್ ಬಳಸಿ ತುಂಬಲಾಗಿದೆ. ಮಹದೇವಪುರ ವಲಯದ (324 ಕಿ.ಮೀ.) ರಸ್ತೆಗಳನ್ನು ಮರು ಡಾಂಬರೀಕರಣ ಮಾಡಲಾಗುತ್ತಿದ್ದು, 427 ಕಿ.ಮೀ. ಉದ್ದದ ರಸ್ತೆಗಳ ಮರು ಡಾಂಬರೀಕರಣ ಪ್ರಾರಂಭಿಸಲಾಗಿದೆ' ಎಂದು ವಿವರಿಸಿದರು.

ದಾಖಲೆ ಪರಿಶೀಲಿಸಿದ ನ್ಯಾಯಪೀಠ, 'ವರದಿ ತೃಪ್ತಿಕರವಾಗಿ ಕಾಣುತ್ತಿಲ್ಲ. ಈ ವಿಷಯದಲ್ಲಿ ಬಿಬಿಎಂಪಿ ತನ್ನ ಪ್ರಗತಿಯನ್ನು ತೋರಿಸದೇ ಹೋದಲ್ಲಿ ಎಂಜಿನಿಯರ್‌ಗಳ ವೇತನ ತಡೆ ಹಿಡಿಯಲು ಆದೇಶಿಸಬೇಕಾಗುತ್ತದೆ' ಎಂದು ಮೌಖಿಕ ಎಚ್ಚರಿಕೆ ನೀಡಿತು. ಅಂತೆಯೇ, 'ರಸ್ತೆ ಗುಂಡಿಗಳನ್ನು ತುಂಬುವ ಕಾಮಗಾರಿಯೂ ಸಮರ್ಪಕವಾಗಿಲ್ಲ. ಈ ರಸ್ತೆಗಳು ವಾಹನ ಸವಾರರಿಗೆ ಬಲು ಕಷ್ಟಕರವಾಗಿ ಪರಿಣಮಿಸಿವೆ' ಎಂದು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದ ಖ್ಯಾತ ಕಾಮಿಡಿ ನಟನ ಸಹೋದರ ಅರೆಸ್ಟ್