ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

Sampriya
ಮಂಗಳವಾರ, 2 ಡಿಸೆಂಬರ್ 2025 (14:47 IST)
Photo Credit X
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ದೊರಕಿದೆ. ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ಅವರ ಜೊತೆಗೆ ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ.  ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ.  

ಇದರಿಂದ ಅಕ್ರಮದ ಆರೋಪ ಹೊರಿಸಿ ಖಾಸಗಿ ದೂರು ದಾಖಲಿಸಿದ್ದ ಬಿಜೆಪಿ ಮುಖಂಡರಾದ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ಎಸ್‌.ಆರ್‌. ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ಅವರಿಗೆ ಹಿನ್ನಡೆಯಾಗಿದೆ. 

ಬಿಜೆಪಿ ಮುಖಂಡರು ದಾಖಲಿಸಿದ್ದ ಖಾಸಗಿ ದೂರು ರದ್ದು ಕೋರಿ ಹಾಗೂ ಆ ದೂರು ದಾಖಲಿಸಿಕೊಂಡು, ಟೆಂಡರ್ ಅಕ್ರಮಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸಚಿವ ಕೆ.ಜೆ ಜಾರ್ಜ್‌ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ, ತಾಂತ್ರಿಕ ವಿಭಾಗದ ನಿರ್ದೇಶಕ ಎಚ್‌.ಜೆ. ರಮೇಶ್‌ ಹೈಕೋರ್ಟ್ ಮೆಟ್ಟಿಲೇರಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments