ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಿಲೀಫ್ ದೊರಕಿದೆ. ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
2024ರಲ್ಲಿ ಬಾಲಕಿ ಮೇಲೆ ಅನುಚಿತವಾಗಿ ಸ್ಪರ್ಶಿಸಿದ ಆರೋಪ ಅವರ ಮೇಲಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಲಾಗಿತ್ತು.
ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.
ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ಬಿಎಸ್‌ವೈ ಅವರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಶನಿವಾರ ಅವರು ಕೋರ್ಟ್‍ಗೆ ಖುದ್ದು ಹಾಜರಾಗುವುದರಿಂದ ರಿಲೀಫ್ ಪಡೆದಿದ್ದಾರೆ. ಖುದ್ದು ವಿಚಾರಣೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಬಿಎಸ್‍ವೈ ಅರ್ಜಿಯ ವಿವರವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.