ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ರಿಲೀಫ್‌

Sampriya
ಶುಕ್ರವಾರ, 14 ಮಾರ್ಚ್ 2025 (14:13 IST)
Photo Courtesy X
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ರಿಲೀಫ್‌ ದೊರಕಿದೆ. ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

2024ರಲ್ಲಿ ಬಾಲಕಿ ಮೇಲೆ ಅನುಚಿತವಾಗಿ ಸ್ಪರ್ಶಿಸಿದ ಆರೋಪ ಅವರ ಮೇಲಿದೆ. ಈ ಸಂಬಂಧ ನಗರ  ಪೊಲೀಸ್ ಆಯುಕ್ತರಿಗೆ  ಬಾಲಕಿಯ ತಾಯಿ ದೂರು ನೀಡಿದ್ದರು. ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಲಾಗಿತ್ತು.

ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ಬಿಎಸ್‌ವೈ ಅವರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ಶನಿವಾರ ಅವರು ಕೋರ್ಟ್‍ಗೆ ಖುದ್ದು ಹಾಜರಾಗುವುದರಿಂದ ರಿಲೀಫ್‌ ಪಡೆದಿದ್ದಾರೆ. ಖುದ್ದು ವಿಚಾರಣೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಬಿಎಸ್‍ವೈ ಅರ್ಜಿಯ ವಿವರವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments